ನವದೆಹಲಿ : ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆ ವಿರೋಧಿಸಿ ಆಮ್ ಆದ್ಮಿ ಪಕ್ಷ ದೆಹಲಿಯ ಜಂತರ್-ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳದಿಂದ ಮಾಧ್ಯಮಗಳನ್ನು ದೂರುವಿಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಇನ್ನು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆಪ್ ನಾಯಕ ಆಶುತೋಷ್, ಬಿಜೆಪಿ ಸರ್ಕಾರ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಪ್ರತಿಭಟನೆಯಲ್ಲಿ ಭಾಗವಹಿಸಲು ದೇಶದ ವಿವಿಧ ರಾಜ್ಯಗಳಿಂದ ರೈತರು ಹಲವು ಆಗಮಿಸುತ್ತಿದ್ದಾರೆ ಎಂದು ಹೇಳಿರುವ ಆಶುತೋಷ್, ಒಂದು ವೇಳೆ ಕೇಂದ್ರ ಸರ್ಕಾರ ಭೂಸ್ವಾಧೀನ ಮಸೂದೆ ಹಿಂಪಡೆಯದಿದ್ದರೆ ರಾಷ್ಟ್ರವ್ಯಾಪಿ ಚಳವಳಿ ನಡೆಸುವುದಾಗಿ ಎಚ್ಚರಿಸಿದ್ದಾರೆ.