ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಏ.25ರಂದು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ದೆಹಲಿಯ ಧೌಲಾದಿಂದ ದ್ವಾರಕಾ ವರೆಗೂ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
ಮೆಟ್ರೋದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಎದುರಿಸುವ ಸಮಸ್ಯೆಗಳನ್ನು ತಿಳಿದುಕೊಳ್ಳುವ ಉದ್ದೇಶದಿಂದ ಪ್ರಧಾನಿ ಮೋದಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಶ್ರೀಧರನ್ ಅವರು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುವಂತೆ ಮನವಿ ಮಾಡಿದ್ದರು. ಇಂದು ಮೆಟ್ರೋದಲ್ಲಿ ಸಂಚರಿಸುವ ಅವಕಾಶ ಒದಗಿಬಂದಿದೆ. ಧೌಲಾದಿಂದ ದ್ವಾರಕಾಗೆ ಪ್ರಯಾಣಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಮೆಟ್ರೋದಲ್ಲಿ ಸಂಚರಿಸಿರುವುದು ಸಂತಸ ತಂದಿದೆ. ಮೆಟ್ರೋ ಪ್ರಯಾಣವನ್ನು ಆನಂದಿಸಿದ್ದೇನೆ, ಇದಕ್ಕಾಗಿ ಶ್ರೀಧರನ್ ಅವರಿಗೆ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಅವರು ಮೆಟ್ರೋದಲ್ಲಿ ಪ್ರಯಾಣಿಸಿದರು.