ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಕೈಗೊಳ್ಳಲಿದ್ದಾರೆ.
ಏ.3ರಿಂದ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಮಹಾರಾಷ್ಟ್ರದ ವಿದರ್ಭದಿಂದ ಪಾದಯಾತ್ರೆ ಪ್ರಾರಂಭವಾಗಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಭೂಸ್ವಾಧೀನ ಕಾಯ್ದೆಯಿಂದ ಉಂಟಾಗುವ ಸಮಸ್ಯೆಗಳನ್ನು ರೈತರಿಗೆ ತಿಳಿಸಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಪಾದಯಾತ್ರೆ ಹಮ್ಮಿಕೊಳ್ಳಲಿದ್ದು, ಜಾಗೃತಿ ಮೂಡಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಪ್ರತಿಕೂಲ ಹವಾಮಾನ ಸ್ಥಿತಿಯಲ್ಲೂ ಸಹ ಕಾಂಗ್ರೆಸ್ ನ ಉಪಾಧ್ಯಕ್ಷ ರಾಹುಲ್ ಗಾಂಧಿ,15-16ಕಿ.ಮಿ ದೂರದಷ್ಟು ಪ್ರಯಾಣವನ್ನು ಪಾದಯಾತ್ರೆಯ ಮೂಲಕವೇ ಸಂಚರಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.
ಸಂಸತ್ ನಲ್ಲೂ ಭೂಸ್ವಾಧೀನ ಮಸೂದೆಯ ವಿರುದ್ಧ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಸ್ತುತ ಅಸ್ಥಿತ್ವದಲ್ಲಿರುವುದು ರೈತರ ಪರ ಕಾಳಜಿ ಹೊಂದಿರುವ ಸರ್ಕಾರ ಅಲ್ಲ. ಸೂಟು ಬೂಟು ಧರಿಸಿ ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡುವ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದರು.