ಕಾಶ್ಮೀರ : ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಶನಿವಾರ ಗ್ರೆನೇಡ್ ದಾಳಿ ನಡೆಸಿದ್ದು,14 ಮಂದಿ ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶ್ರೀನಗರದಿಂದ 52 ಕೀ.ಮಿ ದೂರದಲ್ಲಿರುವ ಶೋಪಿಯಾನ್ ನ ಜನನಿಬಿಡ ಮಾರುಕಟ್ಟೆಯಲ್ಲಿ ಉಗ್ರರು ಭದ್ರತಾ ಪಡೆಗಳನ್ನು ಗುರಿಯಾಗಿರಿಸಿಕೊಂಡು ಎಸೆದ ಗ್ರೆನೇಡ್ ಗುರಿ ತಪ್ಪಿ ನಾಗರಿಕರಿಗೆ ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ 14 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.