ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಇಸ್ರೇಲ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಯಹೂದಿಗಳ ನಾಡಿಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಆದರೆ ಪ್ರಧಾನಿ ಮೋದಿ ಇಸ್ರೇಲ್ ಪ್ರವಾಸದ ಬಗ್ಗೆ ಈ ವರೆಗೂ ದಿನಾಂಕ ನಿಗದಿಯಾಗಿಲ್ಲ. ತಾನೂ ಕೂಡ ಇದೇ ವರ್ಷ ಇಸ್ರೇಲ್, ಪ್ಯಾಲೆಸ್ತೀನ್, ಜೋರ್ಡಾನ್ ಪ್ರವಾಸ ಕೈಗೊಳ್ಳುತ್ತಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
1950ರಲ್ಲೇ ಇಸ್ರೇಲ್ ಗೆ ರಾಷ್ಟ್ರದ ಮಾನ್ಯತೆ ದೊರೆತಿತ್ತಾದರೂ ಸಂಪೂರ್ಣ ರಾಜತಾಂತ್ರಿಕ ಸಂಬಂಧವನ್ನು ಭಾರತ ಆ ದೇಶದೊಂದಿಗೆ ಹೊಂದಿದ್ದು 1992ರಲ್ಲಿ. ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಗೃಹ ಮಂತ್ರಿಯಾಗಿದ್ದ ಎಲ್.ಕೆ.ಆಡ್ವಾಣಿ ಆ ದೇಶಕ್ಕೆ ಭೇಟಿ ನೀಡಿದ್ದರು. ಬಳಿಕ ವಿದೇಶಾಂಗ ಸಚಿವರಾಗಿದ್ದ ಜಸ್ವಂತ್ ಸಿಂಗ್, ಎಸ್.ಎಂ. ಕೃಷ್ಣ ಕೂಡ ತೆರಳಿದ್ದರು. ತೀರಾ ಇತ್ತೀಚೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದರು.