ಪಾಟ್ನಾ : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್.ಜೆ.ಡಿ, ಜೆಡಿಯು ಹಾಗೂ ಕಾಂಗ್ರೆಸ್ ಒಂದಾಗಿ ಬಿಜೆಪಿ ವಿರುದ್ಧ ಸ್ಪರ್ಧಿಸಲಿವೆ ಎಂದು ಜೆಡಿಯು ಅಧ್ಯಕ್ಷ ಶರದ್ ಯಾದವ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಯಾದವ್,ಕಾಂಗ್ರೆಸ್, ಜೆಡಿಯು, ಆರ್.ಜೆ.ಡಿ ಹಾಗೂ ಎನ್.ಸಿ.ಪಿ ಸೇರಿದಂತೆ ಇತರೆ ಪಕ್ಷಗಳು ಒಂದಾಗಿ ಚುನಾವಣೆಗೆ ಸ್ಪರ್ಧಿಸಲಿವೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಜೆಡಿಯು ಹಾಗೂ ಆರ್ಜೆಡಿ ಏಕಾಂಗಿಯಾಗಿ ಚುನಾವಣೆಗೆ ಸ್ಪರ್ಧಿಸಲಿವೆ ಎಂಬ ವರದಿಗಳಿಗೆ ತೆರೆ ಹೇಳಿದ್ದಾರೆ.
ಜನತಾ ಪರಿವಾರ ಒಂದಾಗಿವೆ ಎಂದು ಈಗಾಗಲೇ ಘೋಷಿಸಲಾಗಿದೆ. ಅಲ್ಲದೇ ಈ ಒಗ್ಗಟ್ಟಿನ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ
ಈ ಮಧ್ಯೆ ಜನತಾ ಪರಿವಾರದ ನಿತೀಶ್ ಕುಮಾರ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮುಂದುವರಿದರೆ ಯಾವುದೇ ಅಭ್ಯಂತರವಿಲ್ಲ ಎಂದು ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್.ಜೆ.ಡಿ ಸ್ಪಷ್ಟಪಡಿಸಿದೆ.