ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ 2015ರ ಅಖಿಲ ಭಾರತ ವೈದ್ಯಕೀಯ-ಪೂರ್ವ ಪ್ರವೇಶ ಪರೀಕ್ಷೆಯನ್ನು (ಎಐಪಿಎಂಟಿ) ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಹೊಸದಾಗಿ ಪರೀಕ್ಷೆ ನಡೆಸುವಂತೆ ಸಿ.ಬಿ.ಎಸ್.ಇ(ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಗೆ ನಿರ್ದೇಶನ ನೀಡಿದೆ.
ವೈದ್ಯಕೀಯ-ಪೂರ್ವ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ.ಆರ್.ಕೆ. ಅಗರ್ ವಾಲ್ ಮತ್ತು ಅಮಿತಾವ್ ರಾಯ್ ಅವರ ಪೀಠ, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಈ ಕುರಿತು ತೀರ್ಪು ಪ್ರಕಟಿಸಿದ ಸುಪ್ರೀಂ ಪೀಠ, ಪರೀಕ್ಷೆಯನ್ನು ರದ್ದುಗೊಳಿಸಿ, ಮುಂದಿನ ನಾಲ್ಕು ವಾರಗಳಲ್ಲಿ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವಂತೆ ಆದೇಶಿಸಿದೆ.
ಸುಮಾರು 6.03 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು. ಪೂರ್ವ ವೈದ್ಯ ಮೆಡಿಕಲ್ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಅಷ್ಟೇ ಅಲ್ಲ ಸುಮಾರು 10 ರಾಜ್ಯಗಳಲ್ಲಿ ನಡೆದ ಪರೀಕ್ಷೆಯಲ್ಲಿ ಉತ್ತರಗಳನ್ನು ಕೂಡಾ ವಿದ್ಯುನ್ಮಾನ ಡಿವೈಸ್ ಮೂಲಕ ಕಳುಹಿಸಿದ್ದರು.