ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ರಾಜ್ಯದ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಾದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗು ಜಿಲ್ಲೆಯಲ್ಲಿ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ. ಮುಂದಿನ ಐದು ದಿನಗಳಲ್ಲಿ ಕರಾವಳಿ, ದಕ್ಷಿಣ ಒಳನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕೊಡಗು ಜಿಲ್ಲೆಯಲ್ಲಿ ಕಾವೇರಿ ಮತ್ತು ಲಕ್ಷ್ಮಣತೀರ್ಥ ನದಿ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿದ್ದು, ಭಾಗಮಂಡಲದಲ್ಲಿ ಕಾವೇರಿ ಪ್ರವಾಹ ಮುಂದುವರಿದಿದೆ. ರಾಜ್ಯಾದ್ಯಂತ ಮುಂಗಾರಿನ ಆರ್ಭಟ ಜೋರಾಗಿದ್ದು, ತಲೆಯ ಮೇಲೆ ಮರ ಬಿದ್ದ ಪರಿಣಾಮ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಬ್ಬ ವ್ಯಕ್ತಿ ಮೃತಪಟ್ಟಿರುವ ವರದಿಯಾಗಿದೆ.