Untitled Document
Sign Up | Login    
Dynamic website and Portals
  
July 16, 2015

ಬಿಬಿಎಂಪಿ ಚುನಾವಣಾ ದಿನಾಂಕ ನಿಗದಿ : ಆಗಸ್ಟ್ 22 ಕ್ಕೆ ಚುನಾವಣೆ

ಬಿಬಿಎಂಪಿ (ಫೈಲ್ ಚಿತ್ರ) ಬಿಬಿಎಂಪಿ (ಫೈಲ್ ಚಿತ್ರ)

BW News Bureau : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ.

ಜುಲೈ 28 ರಂದು ನಡೆಯಬೇಕಿದ್ದ ಬೃಹತ್‌ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ತಡೆ ಬಿದ್ದಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆಗಸ್ಟ್ ೨೨ ಕ್ಕೆ ನಿಗದಿಪಡಿಸಲಾಗಿದೆ.

ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, ಎಲ್ಲಾ 198 ವಾರ್ಡ್ ಗಳಿಗೆ ಒಂದೇ ದಿನ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಬಿಬಿಎಂಪಿಗೆ ಚುನಾವಣೆ ನಡೆಸಬೇಕು ಎಂಬ ಹೈಕೋರ್ಟ್‌ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್‌, ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ 8 ವಾರಗಳ ಕಾಲಾವಕಾಶ ನೀಡಿತ್ತು. ಆ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗ ಗುರುವಾರ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಆಗಸ್ಟ್ 3ರಂದು ಬಿಬಿಎಂಪಿ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ಆಗಸ್ಟ್ 10 ನಾಮಪತ್ರ ಸಲ್ಲಿಸಲು ಕೊನೆ ದಿನಾಂಕ, ಆ.11ರಂದು ನಾಮಪತ್ರ ಪರಿಶೀಲನೆ, ಆಗಸ್ಟ್ 22ರಂದು ಮತದಾನ, ಆಗಸ್ಟ್ 25ರಂದು ಮತಎಣಿಕೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : BBMP

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ನಗರದ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.
  • ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ನೇಮಕ
  • ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited