ನವದೆಹಲಿ : 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಯಾಕೂಬ್ ಮೆಮೋನ್ ಜು 30 ರಂದು ನಿಗದಿಯಾದ ತನ್ನ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಬೇಕೆಂದು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾನೆ.
ಯಾಕೂಬ್ ಮೆಮೋನ್ ವಕೀಲರು ಗುರುವಾರ ಸುಪ್ರೀಂ ಕೋರ್ಟ್ ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಕಾನೂನಾತ್ಮಕ ಹೋರಾಟಕ್ಕೆ ಇನ್ನೂ ಕೆಲವು ಆಯ್ಕೆಗಳು ಇರುವುದರಿಂದ, ಮೆಮೋನ್ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಯಾಕೂಬ್ ಮೆಮೋನ್ ಗಲ್ಲು ಶಿಕ್ಷೆ ರದ್ದು ಕೋರಿ ಸಲ್ಲಿಸಿದ್ದ ಮರುಪರಿಶೀಲನಾ (ಕ್ಯೂರೇಟಿವ್) ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿತ್ತು. ಮುಖ್ಯ ನ್ಯಾಯಮೂರ್ತಿ ಎಚ್ ಎಲ್ ದತ್ತು ನೇತೃತ್ವದ ಸುಪ್ರೀಂಕೋರ್ಟ್ ಪೀಠವು ಮಂಗಳವಾರ ಯಾಕೂಬ್ ಅರ್ಜಿಯನ್ನು ತಿರಸ್ಕರಿಸಿ ತೀರ್ಪು ನೀಡಿತ್ತು.