ಬೆಂಗಳೂರು : ವಿಧಾನಪರಿಷತ್ ನ 25 ಸ್ಥಾನಗಳಿಗೆ ಡಿಸೆಂಬರ್ 27ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಅಧಿಸೂಚನೆ ಹೊರಡಿಸಿದೆ.
ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಡಿ.9 ಕಡೆಯ ದಿನವಾಗಿದೆ. ಡಿ.10ರಂದು ನಾಮಪತ್ರಗಳ ಪರಿಶೀಲನೆ ಹಾಗೂ ನಾಮಪತ್ರ ಹಿಂಪಡೆಯಲು ಡಿ.12 ಕೊನೆಯ ದಿನವಾಗಿದೆ ಎಂದು ಹೇಳಿದೆ. 25 ಸದಸ್ಯರ ಅವಧಿ 2016ರ ಜನವರಿ 5ರಂದು ಅಂತ್ಯವಾಗಲಿದೆ. ಆ ನಿಟ್ಟಿನಲ್ಲಿ ತೆರವಾಗಲಿರುವ ವಿಧಾನಪರಿಷತ್ ನ 25 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ.
ಸುಮಾರು 1.07 ಲಕ್ಷ ಮತದಾರರನ್ನು ಹೊಂದಿದ್ದು, ಒಟ್ಟು 6,500 ಗ್ರಾಮ ಪಂಚಾಯ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತ ಚಲಾಯಿಸಲಿದ್ದಾರೆ. ಡಿ.27ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಡಿ.30ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.