ಬೆಂಗಳೂರು : ಉತ್ತರ ಪ್ರದೇಶದ ಖ್ಯಾತ ಗೋ ಕಥಾ ನಿರೂಪಕ ಫೈಜ್ ಖಾನ್ ಅವರಿಂದ 'ಗೋಧೂಳಿ' ಎಂಬ ವಿಶಿಷ್ಟವಾದ ಕಾರ್ಯಕ್ರಮ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಂಗಳವಾರ, ಏಪ್ರಿಲ್ 19 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ.
ಗೋವಿನ ಕುರಿತಾದ ಈ ವಿಶೇಷ ಕಾರ್ಯಕ್ರಮದಲ್ಲಿ, ಗೋ ಸಂರಕ್ಷಕರಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಗೋ ಕಥಾ ನಿರೂಪಕರಾದ ಫೈಜ್ ಖಾನ್ ಗೋಧೂಳಿ ಕಾರ್ಯಕ್ರಮವನ್ನು ನೆಡೆಸಿಕೊಡಲಿದ್ದಾರೆ.
ಯುವ ಬ್ರಿಗೇಡಿನ ಸಹಭಾಗಿತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಖ್ಯಾತ ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಅವರು ಉಪಸ್ಥಿತರಿರಲಿದ್ದಾರೆ ಎಂದು ಶ್ರೀ ಮಠದ ಪತ್ರಿಕಾ ಪ್ರಕಟನೆ ತಿಳಿಸಿದೆ.