ನವದೆಹಲಿ : ಇತ್ತೀಚೆಗಷ್ಟೇ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಮತ್ತೆ ಏರಿಕೆ ಕಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಳ ಮಾಡಿದೆ.
ಪೆಟ್ರೋಲ್ ಪ್ರತಿ ಲೀಟರ್ ಗೆ ರು.1.06 ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ ರು.2.94 ಏರಿಕೆಯಾಗಿದೆ. ಆಯಾ ರಾಜ್ಯಗಳ ತೆರಿಗೆ ಸೇರಿಸಿ ದರೆ ಏರಿಕೆ ಪ್ರಮಾಣ ಇನ್ನೂ ಹೆಚ್ಚಲಿದೆ. ಪರಿಷ್ಕೃತ ದರ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.
ಏ.15ರಂದು ಅಲ್ಪ ಪ್ರಮಾಣದಲ್ಲಿ ತೈಲ ಬೆಲೆ ಇಳಿಕೆಯಾಗಿತ್ತು. ಇದೀಗ ತೈಲ ಒಕ್ಕೂಟಗಳು ಪ್ರತಿ ಹದಿನೈದು ದಿನಗಳಿಗೊಮ್ಮೆ ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯನ್ನಾಧರಿಸಿ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಪರಿಷ್ಕರಿಸಿವೆ.