Untitled Document
Sign Up | Login    
Dynamic website and Portals
  
May 12, 2016

ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಶಶಾಂಕ್‌ ಮನೋಹರ್‌

ನವದೆಹಲಿ : ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಶಶಾಂಕ್‌ ಮನೋಹರ್‌ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಹಸ್ಯ ಮತಪತ್ರಗಳ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ೫೩ ವರ್ಷದ ಶಶಾಂಕ್‌ ಮನೋಹರ್‌ ಅವರು ಅವಿರೋಧವಾಗಿ ಆಯ್ಕೆಯಾದರು.

ಆಯ್ಕೆಯ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಶಶಾಂಕ್‌ ಮನೋಹರ್‌ 'ಐಸಿಸಿ ಅಧ್ಯಕ್ಷನಾಗಿ ಆಯ್ಕೆಯಾಗಿರುವುದು ಹೆಮ್ಮೆ ಎನಿಸುತ್ತಿದೆ. ನನ್ನ ಸಾಮರ್ಥ್ಯದ ಮೇಲೆ ನಂಬಿಕೆ ಇರಿಸಿ ಆಯ್ಕೆ ಮಾಡಿದ ಎಲ್ಲಾ ಐಸಿಸಿ ನಿರ್ದೇಶಕರಿಗೆ ನಾನು ಕೃತಜ್ಞನಾಗಿರುವೆ. ಹಾಗೇ ಬಿಸಿಸಿಐನಲ್ಲಿ ನನಗೆ ಸಹಕಾರ ನೀಡಿದ ಸಹದ್ಯೋಗಿಗಳಿಗೆಲ್ಲರಿಗೂ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ' ಎಂದು ಹೇಳಿದರು.

ಮನೋಹರ್‌ ಅವರು 2015ರ ಅಕ್ಟೋಬರ್‌ನಲ್ಲಿ, ದಾಲ್‌ಮಿಯಾ ಅವರ ನಿಧನದ ಬಳಿಕ, ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಯ ಪುನಾರಚನೆಯ ಕ್ರಮದ ಹಿನ್ನೆಲೆಯಲ್ಲಿ ಮನೋಹರ್‌ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಐಸಿಸಿ ಆಡಳಿತ ಮಂಡಳಿಯ ಅಧ್ಯಕ್ಷ ಪದಕ್ಕೆ ನೇಮಕಗೊಳ್ಳುವವರು ಸದಸ್ಯ ಮಂಡಳಿಯ ಸದಸ್ಯರಾಗಿರಬಾರದು ಎಂಬ ನಿಯಮವಿದೆ.

ಈಚೆಗೆ ದುಬೈನಲ್ಲಿ ನಡೆದಿದ್ದ ಐಸಿಸಿ ಸಭೆಯಲ್ಲಿ ಅಧ್ಯಕ್ಷ ಪದಕ್ಕೆ ಸ್ವತಂತ್ರ ವ್ಯಕ್ತಿಯನ್ನು ನೇಮಕ ಮಾಡಲು ಮತ್ತು ಮೇ ತಿಂಗಳಲ್ಲಿ ರಹಸ್ಯ ಮತಪತ್ರಗಳ ಮೂಲಕ ಆಯ್ಕೆ ಪ್ರಕ್ರಿಯೆಯನ್ನು ನಡೆಸಲು ತೀರ್ಮಾನಿಸಲಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Sports

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ.
  • ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ
  • ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited