Untitled Document
Sign Up | Login    
Dynamic website and Portals
  
June 29, 2016

ಇಸ್ತಾಂಬುಲ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 38 ಮಂದಿ ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ

ಇಸ್ತಾಂಬುಲ್ : ಟರ್ಕಿ ರಾಜಧಾನಿ ಇಸ್ತಾಂಬುಲ್ ನಲ್ಲಿ ಸಂಭವಿಸಿದ ತ್ರಿವಳಿ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ 38 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಶ್ವದ ಅತಿ ಹೆಚ್ಚು ಜನದಟ್ಟಣೆ ಇರುವ ಟರ್ಕಿಯ ಇಸ್ತಾಂ​ಬುಲ್ ವಿಮಾನ ನಿಲ್ದಾಣದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಸ್ತಾಂಬುಲ್ ಆತಾತುರ್ಕ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಮೂವರು ಏಕಾಏಕಿ ಎಕೆ 47 ಗನ್ ಮೂಲಕ ಗುಂಡಿನ ಸುರಿಮಳೆ ಗೈದರು. ಪರಿಣಾಮ ನಿಲ್ದಾಣದಲ್ಲಿದ್ದ ಹತ್ತಾರು ಮಂದಿ ಗುಂಡೇಟಿನಿಂದ ಸಾವನ್ನಪ್ಪಿದರು. ಗುಂಡಿನ ಶಬ್ದ ಕೇಳುತ್ತಿದ್ದಂತೆಯೇ ಉಗ್ರ ಮೇಲೆ ದಾಳಿ ನಡೆಸಿದ ಭದ್ರತಾ ಸಿಬ್ಬಂದಿಗಳು ಓರ್ವ ಉಗ್ರನಿಗೆ ಗುಂಡು ಹೊಡೆಯುತ್ತಿದ್ದಂತೆಯೇ ಆತ ತನ್ನ ಬಳಿ ಇದ್ದ ಆತ್ಮಹತ್ಯಾ ಬಾಂಬ್ ಅನ್ನು ಸ್ಫೋಟಿಸಿಕೊಂಡ. ಪರಿಣಾಮ ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಬಾಂಬ್ ಸ್ಫೋಟದಲ್ಲಿ ಮೃತಪಟ್ಟರು.

ನಿಲ್ದಾಣದ ಆರೈವಲ್ ಹಾಲ್ ನಲ್ಲಿ ಮತ್ತೆರಡು ಆತ್ಮಹತ್ಯಾ ಬಾಂಬ್ ಸ್ಫೋಟಗಳು ಸಂಭವಿಸಿದ್ದು, ವಿಮಾನಕ್ಕಾಗಿ ಕಾದು ಕುಳಿತಿದ್ದ ಹಲವು ಮಂದಿ ಪ್ರಯಾಣಿಕರು ಇಲ್ಲಿ ಸಾವನ್ನಪ್ಪಿದ್ದಾರೆ. ಅತ್ತ ನಿಲ್ದಾಣದ ಟಿಕೆಟ್ ಬುಕ್ಕಿಂಗ್ ಹಾಲ್ ನಲ್ಲಿ ಬಾಂಬ್ ಸ್ಫೋಟ ಕೇಳಿಬರುತ್ತಿದ್ದಂತೆಯೇ ಟಿಕೆಟ್ ಬುಕ್ಕಿಂಗ್ ಹಾಲ್ ನಲ್ಲಿ ಅವಿತಿದ್ದ ಉಗ್ರರು ನೋಡ ನೋಡುತ್ತಿದ್ದಂತೆಯೇ ಗುಂಡಿನ ಸುರಿಮಳೆ ಗೈದು ತಮ್ಮನ್ನು ತಾವು ಸ್ಫೋಟಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರಂತದ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿರುವ ಟರ್ಕಿ ಪ್ರಧಾನಿ ಬಿನಾಲಿ ಇಡಿರಿಮ್ ಇದು ಇಸ್ಲಾಮಿಕ್ ರಾಷ್ಟ್ರಗಳ ಕೈವಾಡದಿಂದ ಐಸಿಎಸ್ ಉಗ್ರರು ನಡೆಸಿದ ದಾಳಿ ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited