Untitled Document
Sign Up | Login    
Dynamic website and Portals
  
July 30, 2016

ಸಾರ್ಕ್ ಶೃಂಗ ಸಭೆ ವೇಳೆ ಪಾಕ್ ಜತೆ ದ್ವಿಪಕ್ಷೀಯ ಮಾತುಕತೆ ಇಲ್ಲ

Rajnath Singh (File Pic) Rajnath Singh (File Pic)

ನವದೆಹಲಿ : ಆಗಸ್ಟ್ 4ರಂದು ಇಸ್ಲಾಮಾಬಾದ್​ನಲ್ಲಿ ನಡೆಯಲಿರುವ ಸಾರ್ಕ್ ಶೃಂಗ ಸಭೆ ವೇಳೆ ಪಾಕಿಸ್ತಾನದ ಜೊತೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಯಾವುದೇ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟ ಪಡಿಸಿದೆ.

ಭಾರತದ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಸಾರ್ಕ್ ಶೃಂಗ ಸಭೆಗೆ ಹೋಗುತ್ತಿದ್ದಾರೆ. ಅಲ್ಲಿ ಪಾಕಿಸ್ತಾನದ ಜೊತೆಗೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂಬುದಾಗಿ ಖಂಡತುಂಡವಾಗಿ ಸ್ಪಷ್ಟ ಪಡಿಸುತ್ತಿದ್ದೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ ಸ್ವರೂಪ್ ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವಾಲಯದ ಹೆಸರು ಉಲ್ಲೇಖಿಸದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿದ ಕೆಲವು ವರದಿಗಳು ರಾಜನಾಥ್ ಸಿಂಗ್ ಅವರು ಪಾಕ್ ಗೃಹ ಸಚಿವ ಚೌಧರಿ ನಿಸಾರ್ ಅಲಿ ಖಾನ್ ಮತ್ತು ಪಾಕ್ ಪ್ರಧಾನಿ ನವಾಜ್ ಷರೀಪ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಸ್ವರೂಪ್ ಈ ಸ್ಪಷ್ಟನೆ ನೀಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited