Untitled Document
Sign Up | Login    
Dynamic website and Portals
  
August 16, 2016

ಭಾರತೀಯ ಸೇನೆ ವಿರುದ್ಧ ಘೋಷಣೆ: ಎಬಿವಿಪಿ ಪ್ರತಿಭಟನೆ; ಲಘು ಲಾಠಿ ಪ್ರಹಾರ

ಬೆಂಗಳೂರು : ಕಾಶ್ಮೀರ ವಿಚಾರ ಸಂವಾದದಲ್ಲಿ ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಡಿಯಾ ಮತ್ತು ದಿ ಯುನೈಟೆಡ್ ಥಿಯಾಲಜಿಕಲ್ ಕಾಲೇಜ್ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆಯ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಮಂಗಳವಾರ ನೂರಾರು ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಕೆಲ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಂತೆಯೇ ಪೊಲೀಸರು ಅವರನ್ನು ತಡೆದರು. ಈ ವೇಳೆ ಕೆಲ ಕಾರ್ಯಕರ್ತರು ಸಮೀಪದಲ್ಲಿಯೇ ಇದ್ದ ಪೊಲೀಸ್ ಆಯುಕ್ತರ ಕಚೇರಿಯತ್ತ ನುಗ್ಗಿದ್ದು ಅವರನ್ನು ಕೂಡ ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಘರ್ಷಣೆ ಏರ್ಪಟ್ಟ ಹಿನ್ನಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರವನ್ನು ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ನೂಕು ನುಗ್ಗಲಿಗೆ ಕಾರಣವಾಗಿದೆ. ಪ್ರತಿಭಟನಾ ನಿರತರನ್ನು ನಿಭಾಯಿಸುವಲ್ಲಿ ಪೊಲೀಸರು ಹರಸಾಹಸಪಟ್ಟಿದ್ದು,ಮಾರ್ಗದಲ್ಲಿನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಪ್ರತಿಭಟನೆಯಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಯುವಕರು ಪಾಲ್ಗೊಂಡಿದ್ದಾರೆ. ದೇಶ ವಿರೋಧಿ ಘೊಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಅಮ್ನೆಸ್ಟಿ ಇಂಡಿಯಾ ಮತ್ತು ಯುನೈಟೆಡ್ ಥಿಯಾಲಜಿಕಲ್ ಕಲೇಜು ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ಪ್ರಕರಣ ಸಂಬಂಧ ರಾಜ್ಯಪಾಲರು ಮಧ್ಯ ಪ್ರವೇಶಿಸಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಮನವಿ ಮಾಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited