Untitled Document
Sign Up | Login    
Dynamic website and Portals
  
September 2, 2016

ಎತ್ತಿನ ಹೊಳೆ ಯೋಜನೆ: ಕಾಮಗಾರಿ ವೇಗಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಎತ್ತಿನ ಹೊಳೆ ಯೋಜನೆಯ ಅನುಷ್ಠಾನದ ವೇಗವನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಎತ್ತಿನಹೊಳೆ ಯೋಜನೆ ಹಾಗೂ ಕೋರಮಂಗಲ-ಚಲ್ಲಘಟ್ಟ ಕಣಿವೆ ಯೋಜನೆಯ ಅನುಷ್ಠಾನ ಕುರಿತಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಯಲು ಸೀಮೆ ಪ್ರದೇಶದ ಭರವಸೆಯ ಯೋಜನೆ ಎನಿಸಿರುವ ಎತ್ತಿನ ಹೊಳೆ ಯೋಜನೆಯ ಅನುಷ್ಠಾನದ ವೇಗ ಹೆಚ್ಚಿಸಬೇಕು ಎಂದರು.

ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ 12,912.36 ಕೋಟಿ ರೂ ವೆಚ್ಚದ ರಾಜ್ಯ ಸರ್ಕಾರದ ಈ ಮಹತ್ವಾಕಾಂಕ್ಷೀ ಯೋಜನೆಯ ಅನುಷ್ಠಾನದಲ್ಲಿ ನಿರೀಕ್ಷಿತ ಪ್ರಗತಿಯಾಗಿಲ್ಲ ಎಂದರು.

ಯೋಜನಾ ಅನುಷ್ಠಾನದಲ್ಲಿ ಸಮಸ್ಯೆಗಳಿದ್ದಲ್ಲಿ, ಅವುಗಳನ್ನು ಕೂಡಲೇ ಸರ್ಕಾರದ ಗಮನಕ್ಕೆ ತನ್ನಿ. ಕೆಲವು ಸಮಸ್ಯೆಗಳನ್ನು ಅಧಿಕಾರಿಗಳು ತಮ್ಮ ಹಂತದಲ್ಲಿಯೇ ಬಗೆಹರಿಸಲು ಸಾಧ್ಯವಾಗದಿರಬಹುದು. ಯೋಜನೆಗೆ ಎದುರಾಗುತ್ತಿರುವ ತೊಡಕುಗಳನ್ನು ಸ್ಪಷ್ಟಪಡಿಸಿದಲ್ಲಿ, ಅವುಗಳ ನಿವಾರಣೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಕೂಡಲೇ ಸ್ಪಂದಿಸಿ ಸಭೆಗೆ ಹಾಜರಿದ್ದ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳನ್ನು ಆಮಂತ್ರಿಸಿ, ಸಮಸ್ಯೆಗಳನ್ನು ಬಗೆಹರಿಸಲು ಮುಂದಾದರು. ಯೋಜನೆಯ ಅನುಷ್ಠಾನಕ್ಕೆ ಪರಿಸರ ಸಂಬಂಧೀ ಅನುಮತಿಗಳನ್ನು ದೊರಕಿಸಿಕೊಡುವಂತೆ ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಅವರಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited