Untitled Document
Sign Up | Login    
Dynamic website and Portals
  
September 24, 2016

ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ

ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ

ಬೆಂಗಳೂರು : ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಅತ್ಯಗತ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಬಲೂನ್‍ಗಳನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡಾ ಕೂಟದಲ್ಲಿ ಸುಮಾರು ಎರಡು ಸಾವಿರ ಮಕ್ಕಳು 19 ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಮಕ್ಕಳು ಶಿಕ್ಷಣದ ಜೊತೆಗೆ ಕ್ರೀಡೆಗಳನ್ನು ಸಹ ಸ್ಪರ್ಧಾತ್ಮಕವಾಗಿ ರೂಢಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿ ಕ್ರೀಡಾಪಟುಗಳಿಗೆ ಶುಭ ಕೋರಿದರು.

ವಿಧಾನಪರಿಷತ್ ಸದಸ್ಯರಾದ ರಾಮಚಂದ್ರಗೌಡ ಅವರು ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ, ಯುವಜನತೆಗೆ ಅದರಲ್ಲೂ ಕ್ರೀಡಾಪಟುಗಳಿಗೆ ಸಮಯ ಪಾಲನೆ, ಶಿಸ್ತು ಅತಿ ಮುಖ್ಯ ಕ್ರೀಡೆಯಲ್ಲಿ ಗೆಲವು ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ ಎಂದರು.

ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಮುನಿರಾಜು ಮಾತನಾಡಿ, ಜಿಲ್ಲಾ ಪಂಚಾಯತ್ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕ್ರೀಡೆಯಲ್ಲಿ ಪ್ರಶಸ್ತಿ ಮುಖ್ಯವಲ್ಲ, ಉತ್ಸಾಹದಿಂದ ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲ್ಲುತ್ತೇನೆ ಎಂಬ ಆತ್ಮ ವಿಶ್ವಾಸ ಮೂಡಿಸಿಕೊಂಡಾಗ ಗೆಲುವು ಖಚಿತ ಎಂದರಲ್ಲದೆ ಕ್ರೀಡೆಗಳನ್ನು ಸ್ಪರ್ಧಾತ್ಮಕವಾಗಿ ರೂಢಿಸಿಕೊಂಡು ಶಾಲೆಗೆ, ಜಿಲ್ಲೆಗೆ ಕೀರ್ತಿ ತರಬೇಕೆಂದರು.

ಈ ರೀತಿಯ ಕ್ರೀಡೆಯಲ್ಲಿ ಆಯ್ಕೆಯಾದವರಲ್ಲಿ ಕೆಲವರು ಸೈನಿಕರು, ಪೊಲೀಸರಾಗುತ್ತಾರೆ. ಮತ್ತೆ ಕೆಲವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪದಕ ಗೆಲ್ಲುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ನರಸಿಂಹಮೂರ್ತಿ ಉಪಸ್ಥಿತರಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Sports

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ.
  • ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ
  • ರಿಯೋ ಒಲಿಂಪಿಕ್ಸ್: ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಗೆದ್ದ ಪಿವಿ ಸಿಂಧು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited