Untitled Document
Sign Up | Login    
Dynamic website and Portals
  

Related News

ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು

ಪುತ್ತೂರಿನ ಅನಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನೈಡ್ ಮೋಹನ್ ಕುಮಾರ್ ಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವನ ಪರ್ಯಂತ ಜೈಲುಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮಳೀಮಠ್, ನ್ಯಾ ನ್ಯಾ ಜಾನ್ ಮೈಕೆಲ್ ಕುನ್ನಾ ಅವರಿದ್ದ...

ಸಂಸತ್ತಿನಲ್ಲಿ ಬಾಲಾಪರಾಧಿ ಕಾಯ್ದೆ ಅಂಗೀಕಾರ

ಮಂಗಳವಾರ ರಾಜ್ಯಸಭೆಯಲ್ಲಿ ಬಾಲಾಪರಾಧಿ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ ಈಗ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆಕಿದೆ. ಈ ಸಂದರ್ಭದಲ್ಲಿ ಕಲಾಪದಲ್ಲಿ ಉಪಸ್ಥಿತರಿದ್ದ ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದರು. ಈ ಕಾಯ್ದೆಯ ಪ್ರಕಾರ, ಘೋರ ಅಪರಾಧ ಮಾಡಿದ 16-18 ವರ್ಷ...

ಸಲ್ಮಾನ್ ಖಾನ್ ಹಿಟ್ ಅಂಡ್ ರನ್ ಕೇಸ್ಃ ಸುಪ್ರೀಂ ಕೋರ್ಟಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬುಧವಾರ ...

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಮೇಲ್ಮನವಿ ತೀರ್ಪು ಇಂದು ಪ್ರಕಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರೂ. ದಂಡ ಪ್ರಶ್ನಿಸಿ ಜಯಲಲಿತಾ ಸಲ್ಲಿಸಿದ್ದ ಮೇಲ್ಮನವಿ ತೀರ್ಪು ಸೋಮವಾರ ಹೈಕೋರ್ಟ್‌ ನಲ್ಲಿ ಪ್ರಕಟವಾಗಲಿದೆ. ನ್ಯಾ.ಸಿ.ಆರ್.ಕುಮಾರಸ್ವಾಮಿ ಅವರ...

ಸಲ್ಮಾನ್ ಖಾನ್ ಗೆ ಮಧ್ಯಂತರ ಜಾಮೀನು ಮಂಜೂರು

2002ರ ಹಿಟ್ ಆಂಟ್ ರನ್ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಹಾಗೂ ಜಾಮೀನು ಕೋರಿ...

ಭಯೋತ್ಪಾದಕರಿಗಾಗಿಯೇ ಪ್ರತ್ಯೇಕ ಜೈಲು ವ್ಯವಸ್ಥೆ ಮಾಡಿ: ಕೇಂದ್ರ ಸರ್ಕಾರದ ಆದೇಶ

ಭಯೋತ್ಪಾದಕರು ಜೈಲಿನಲ್ಲಿ ತಮ್ಮೊಂದಿಗಿರುವ ಖೈದಿಗಳನ್ನು ಉಗ್ರವಾದ ನಡೆಸುವಂತೆ ಪ್ರಚೋದಿಸುತ್ತಿರುವುದು ಕಂಡುಬಂದಿದ್ದು, ಭಯೋತ್ಪಾದಕರಿಗಾಗಿಯೇ ಪ್ರತ್ಯೇಕ ಜೈಲು ವವಸ್ಥೆ ಮಾಡಬೇಕಿದೆ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಭಯೋತ್ಪಾದಕರು ಇತರ ಕ್ರಿಮಿನಲ್ ಅಪರಾಧಿಗಳನ್ನು ತಮ್ಮೊಂದಿಗೆ ಸೇರುವಂತೆ ಪ್ರಚೋದಿಸುತ್ತಿರುವ ಬಗ್ಗೆ ಕೇಂದ್ರದ ಭದ್ರತಾ...

ರಸ್ತೆ ಸಾರಿಗೆ, ಸುರಕ್ಷತಾ ಮಸೂದೆಗೆ ವಿರೋಧ: ಗುರುವಾರ ಬಸ್ ಸಂಚಾರ ಅಸ್ತವ್ಯಸ್ಥ ಸಾಧ್ಯತೆ

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರಸ್ತೆ ಸಾರಿಗೆ ಮತ್ತು ಸುರಕ್ಷತಾ ಮಸೂದೆಯನ್ನು ವಿರೋಧಿಸಿ ಅಖಿಲ ಭಾರತ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ದೇಶಾದ್ಯಂತ ನೀಡಿರುವ ಮುಷ್ಕರಕ್ಕೆ ರಾಜ್ಯದಿಂದಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕೇಂದ್ರ ಸರ್ಕಾರದ ಮಸೂದೆಯನ್ನು ಕಾರ್ಮಿಕ ಸಂಘಗಳು, ವಾಹನ ಚಾಲಕರ ಸಂಘಟನೆಗಳು...

ಈಜಿಪ್ಟ್ ಪದಚ್ಯುತ ಅಧ್ಯಕ್ಷ ಮೋರ್ಸಿಗೆ 20 ವರ್ಷ ಜೈಲುಶಿಕ್ಷೆ

ಪ್ರತಿಭಟನಾಕಾರರ ಬಂಧನ ಹಾಗೂ ಪ್ರತಿಭಟನಾಕಾರರಿಗೆ ಚಿತ್ರಹಿಂಸೆ ಕೊಟ್ಟ ಆರೋಪ ಎದುರಿಸುತ್ತಿದ್ದ ಈಜಿಪ್ಟ್ ನ ಪದಚ್ಯುತ ಮಾಜಿ ಅಧ್ಯಕ್ಷ ಮೊಹಮ್ಮದ್ ಮೋರ್ಸಿಗೆ ಈಜಿಪ್ಟ್ ಕೋರ್ಟ್ 20 ವರ್ಷಗಳ ಜೈಲುಶಿಕ್ಷೆ ವಿಧಿಸಿದೆ. ಹಲವು ವಿಚಾರಣೆಗಳ ಬಳಿಕ ಪದಚ್ಯುತಗೊಂಡ ಈಜಿಪ್ಟ್ ಅಧ್ಯಕ್ಷ ಮೋರ್ಸಿ ಹಲವು ಆರೋಪಗಳ ಪೈಕಿ...

ಸತ್ಯಂ ಕಂಪ್ಯೂಟರ್ಸ್ ಹಗರಣ: ರಾಮಲಿಂಗಾರಾಜು ಸೇರಿ 10 ಮಂದಿಗೆ 7ವರ್ಷ ಜೈಲು

ಬಹುಕೋಟಿ ಸತ್ಯಂ ಕಂಪ್ಯೂಟರ್ಸ್ ಹಗರಣದಲ್ಲಿ ರಾಮಲಿಂಗಾರಾಜು ಸೇರಿದಂತೆ ಹತ್ತು ಮಂದಿ ಆರೋಪಿಗಳು ದೋಷಿ ಎಂದು ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಹತ್ತು ಜನರ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಇಂದೇ ಪ್ರಕಟಿಸಿದೆ. ಸಿಬಿಐ ವಿಶೇಷ ನ್ಯಾಯಾಧೀಶ ಬಿ.ವಿ.ಎಲ್‌.ಎನ್‌ ಚಕ್ರವರ್ತಿ,...

ವಿದೇಶಗಳಲ್ಲಿ ಕಪ್ಪು ಹಣ ಬಚ್ಚಿಟ್ಟವರಿಗೆ ಜೈಲು ಶಿಕ್ಷೆ

ವಿದೇಶಗಳಲ್ಲಿ ಕಪ್ಪು ಹಣವನ್ನು ಬಚ್ಚಿಡುವವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸುವ ಕಪ್ಪು ಹಣ ನಿಯಂತ್ರಣ ಕುರಿತ ವಿಧೇಯಕವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು. ಬಜೆಟ್‌ನಲ್ಲಿ ನೀಡಿದ್ದ ಆಶ್ವಾಸನೆಯಂತೆ ಲೋಕಸಭೆಯಲ್ಲಿ ಜೇಟ್ಲಿ, 88 ನಿಯಮ...

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ: ಹಂತಕರಿಗೆ 5 ವರ್ಷ ಜೈಲು

ಪರ-ವಿರೋಧದ ನಡುವೆಯೂ ಮಹಾರಾಷ್ಟ್ರ ಸರ್ಕಾರ ಕೊನೆಗೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದಿದೆ. ಗೋಹತ್ಯೆ ಮಾಡುವವರು 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಮಹಾರಾಷ್ಟ್ರ ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಈ ನಿಷೇಧವನ್ನು ಕೈಗೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಇನ್ನು ಮುಂದೆ ಅಕ್ರಮವಾಗಿ ಜಾನುವಾರು...

ಕಿಸ್ ಆಫ್ ಲವ್ ಆಚರಣೆಗೆ ಅನುಮತಿ ಇಲ್ಲ: ಪೊಲೀಸ್ ಆಯುಕ್ತರ ಸ್ಪಷ್ಟನೆ

ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಕಿಸ್ ಆಫ್ ಲವ್ ಆಚರಣೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಯುಕ್ತ ಎಂ.ಎನ್ ರೆಡ್ಡಿ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಂ.ಎನ್ ರೆಡ್ಡಿ, ನವೆಂಬರ್ 30 ರಂದು ಟೌನ್ ಹಾಲ್ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ...

6 ತಿಂಗಳಲ್ಲಿ ಕಪ್ಪುಹಣ ವಾಪಸ್: ಸುಬ್ರಹ್ಮಣ್ಯನ್ ಸ್ವಾಮಿ

ಹೊರ ದೇಶದಲ್ಲಿ ಸಂಗ್ರಹವಾಗಿರುವ ಕೆಂಪುಹಣವನ್ನು ಮುಂದಿನ 6 ತಿಂಗಳೊಳಗೆ ಭಾರತಕ್ಕೆ ತರುವ ಎಲ್ಲ ಸಿದ್ದತೆಗಳು ನಡೆದಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್‌ ಸ್ವಾಮಿ ತಿಳಿಸಿದ್ದಾರೆ. ಮಂಗಳೂರಿನ ಸಿಟಿಜನ್ಸ್‌ ಕೌನ್ಸಿಲ್‌ ಆಶ್ರಯದಲ್ಲಿ ಸಂಘನಿಕೇತನದಲ್ಲಿ ಆಜೋಜಿಸಲಾಗಿದ್ದ ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ವಿರುದ್ಧ ಸಮರ ಎಂಬ ಕುರಿತು...

ಸಿಬಿಐ ಕಪಾಳಮೋಕ್ಷ ಮಾಡಿ ಡಿ.ಕೆ.ಶಿಯನ್ನು ಜೈಲಿಗೆ ಕಳುಹಿಸಲಿದೆ: ಹಿರೇಮಠ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ, ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಕಪಾಳಮೋಕ್ಷ ಮಾಡಿ ಜೈಲಿಗೆ ಕಳುಹಿಸಲಿದೆ ಎಂದು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ, ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸುವ ಪರಿಸ್ಥಿತಿ ಬರಲಿದೆ...

ನನ್ನ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ: ಜಯಲಲಿತಾ

ನನ್ನ ಸಾರ್ವಜನಿಕ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ, ಆದರೂ ಎಂದಿಗೂ ನಾನು ಅಳುಕುವುದಿಲ್ಲ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಹೇಳಿದ್ದಾರೆ. 66.65ಕೋಟಿ ರೂ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲುಶಿಕ್ಷೆಗೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಒಂದು ದಿನದ ಬಳಿಕ...

ಜೈಲಿನಿಂದ ಬಿಡುಗಡೆಗೊಂಡ ಜಯಲಲಿತಾ

ಕಳೆದ 21 ದಿನಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಬಿಡುಗಡೆಗೊಂಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಮಧ್ಯಾಹ್ನ 3:15ರ ವೇಳೆ ಜಯಲಲಿತಾ ಹಾಗೂ ಅವರ ದತ್ತು ಪುತ್ರ ಸುಧಾಕರನ್,...

ಜಯಲಲಿತಾ ಬಿಡುಗಡೆ ಹಿನ್ನಲೆ: ಜೈಲಿನ ಸುತ್ತ ನಿಷೇಧಾಜ್ನೆ ಜಾರಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ 21ದಿಗಳಿಂದ ಜೈಲುವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರೆತ ಹಿನ್ನಲೆಯಲ್ಲಿ ಅ.18ರಂದು ಜಯಲಲಿತಾ ಪರಪ್ಪನ ಅಗ್ರಹಾರ ಜೈಲಿನಿಂದ...

ಜಯಲಲಿತಾಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂ ಕೋರ್ಟ್ ಅ.17ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೈಲು ಶಿಕ್ಷೆ ಅಮಾನತು ಹಾಗೂ ಜಾಮೀನು ನೀಡಬೇಕೆಂದು...

ಓಂ ಪ್ರಕಾಶ್ ಚೌಟಾಲಾ ಶರಣಾಗತಿ

ದೆಹಲಿ ಹೈಕೋರ್ಟ್ ಆದೇಶ ಹಿನ್ನಲೆಯಲ್ಲಿ ಹರ್ಯಾಣಾ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಜೈಲಾಧಿಕಾರಿಗಳ ಮುಂದೆ ಶರಣಾಗತರಾಗಿದ್ದಾರೆ. ಜಾಮೀನು ದುರ್ಬಳಕೆ ಮಾಡಿಕೊಂಡ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಓಂ ಪ್ರಕಾಶ್ ಚೌಟಾಲಾ ಅವರಿಗೆ ಒಂದುದಿನದೊಳಗೆ ಜೈಲಧಿಕಾರಿಗಳ ಎದುರು ಶರಣಾಗತರಗುವಂತೆ ಅ.10ರಂದು ಸೂಚನೆ ನೀಡಿತ್ತು. ನ್ಯಾಯಾಲಯದ...

ತಮಿಳುನಾಡಿನಲ್ಲಿ ಕನ್ನಡಿಗರಿಗೆ ಎಐಡಿಎಂಕೆ ಕಾರ್ಯಕರ್ತರಿಂದ ಬೆದರಿಕೆ

ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ...

ಜಯಲಲಿತಾಗೆ ಜೈಲು ಶಿಕ್ಷೆ ಹಿನ್ನಲೆ: ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಕೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಂದೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ತಮ್ಮ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಜಯಲಲಿತಾ ಪರ ಹೈಕೋರ್ಟ್ ನಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಮ್...

ಜಯಲಲಿತಾಗೆ ಜೈಲು ಶಿಕ್ಷೆ: ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ-ಸಿದ್ದರಾಮಯ್ಯ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆಯಾಗಲು ಕರ್ನಾಟಕ ಕಾರಣವಲ್ಲ, ಕೋರ್ಟ್ ತೀರ್ಪಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದಲ್ಲಿ ತೀರ್ಪು...

ತಮಿಳುನಾಡು ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಆಯ್ಕೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆ ಹಿನ್ನಲೆಯಲ್ಲಿ ನೂತನ ಮುಖ್ಯಮಂತ್ರಿಯನ್ನಾಗಿ ಪನ್ನೀರ್ ಸೆಲ್ವಂ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಪನ್ನೀರ್ ಸೆಲ್ವಂ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ...

ಜಯಲಲಿತಾ ವಿರುದ್ಧದ ಆರೋಪ ಸಾಬೀತು: 4 ವರ್ಷ ಜೈಲು ಶಿಕ್ಷೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಸ್ಥಾಪಿಸಲಾಗಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ...

ನ್ಯಾಯಾಲಯದ ಆದೇಶ ಪಾಲಿಸದ ಹಿನ್ನಲೆ: ಇಬ್ಬರು ವಿಜ್ನಾನಿಗಳಿಗೆ ಜೈಲುಶಿಕ್ಷೆ

ನ್ಯಾಯಾಲಯದ ಆದೇಶವನ್ನು ಪಾಲಿಸದ ಡಿಆರ್‌ಡಿಒದ ಇಬ್ಬರು ವಿಜ್ನಾನಿಗಳಿಗೆ ಚೆನ್ನೈ ಹೈಕೋರ್ಟ್ ಜೈಲುಶಿಕ್ಷೆ ವಿಧಿಸಿದೆ. ರಕ್ಷಣಾ ಸಚಿವಾಲಯದ ವೈಜ್ನಾನಿಕ ಸಲಹೆಗಾರ ಮತ್ತು ಡಿಆರ್‌ಡಿಒದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಹಾನಿರ್ದೇಶಕರಾಗಿರುವ ವಿ.ಕೆ. ಸರಸ್ವತ್ ಹಾಗೂ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೋರೇಟರಿ(ಡಿಎಂಆರ್‌ಎಲ್)ಯ ನಿರ್ದೇಶಕ ಜಿ. ಮಾಲಕೊಂಡಯ್ಯ...

ಮಮತಾ ಬ್ಯಾನರ್ಜಿ ಬಂಟರು ಶೀಘ್ರದಲ್ಲಿ ಜೈಲಿಗೆ ಹೋಗುತ್ತಾರೆ: ಅಮಿತ್ ಶಾ

ಶಾರದಾ ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂಟರು ಶೀಘ್ರದಲ್ಲಿಯೇ ಜೈಲು ಪಾಲಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾರದಾ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited